ನಾನು ಪ್ರಾಥಮಿಕ ಶಾಲಾ ಶಿಕ್ಷಕನಾಗಿದ್ದು, 20 ವರ್ಷ ಪೂರ್ಣಗೊಂಡಿದೆ. ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ನೀಡಲು ಬಯಸಿದ್ದೇನೆ. ಈ ರಾಜೀನಾಮೆ ಸಲ್ಲಿಸುವುದು ಹೇಗೆ? ದಯವಿಟ್ಟು ತಿಳಿಸಿ.
| ತೀರ್ಥಪ್ಪ ತೋಟಗಾರ್ ರಾಯಚೂರು
ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 285(2)ರ ಮೇರೆಗೆ ಸದರಿ ಹುದ್ದೆಗೆ ಸ್ವಯಂನಿವೃತ್ತಿ ಮೂಲಕ ರಾಜೀನಾಮೆ ನೀಡಲು ಮೂರು ತಿಂಗಳು ಮುಂಚಿತವಾಗಿ ನಿಮ್ಮ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಆಗ ನಿಮಗೆ ಪಿಂಚಣಿ ಸೌಲಭ್ಯಗಳು ಲಭ್ಯವಾಗುತ್ತವೆ. ಆದರೆ ನೀವು ಇಂತಹ ಯಾವುದೇ ಆರ್ಥಿಕ ಮತ್ತು ಸೇವಾ ಸೌಲಭ್ಯಗಳ ಬಗ್ಗೆ ಅಪೇಕ್ಷಿಸದಿದ್ದರೆ ಒಂದು ತಿಂಗಳ ಮುಂಚಿತವಾಗಿ ನಿಮ್ಮ ನೇಮಕಾತಿ ಪ್ರಾಧಿಕಾರಕ್ಕೆ ಖುದ್ದಾಗಿ ರಾಜೀನಾಮೆ ಪತ್ರ ಸಲ್ಲಿಸಿ ಅದರ ಅಂಗೀಕಾರವಾದ ನಂತರ ಕರ್ತವ್ಯದಿಂದ ಬಿಡುಗಡೆ ಹೊಂದಬೇಕಾಗುತ್ತದೆ. ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ‘ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು’ ಪುಸ್ತಕವನ್ನು ನೋಡಬಹುದು.
ಪ್ರಶ್ನೆ ಕೇಳಿ ಪರಿಹಾರ ಪಡೆಯಿರಿ
ನಿಮ್ಮ ಪ್ರಶ್ನೆಗಳನ್ನು ನಮಗೆ ಕಳುಹಿಸಿ. ವಿಳಾಸ: ವಿಜಯವಾಣಿ ನಂ. 24, ಶ್ರೀ ಸಾಯಿರಾಂ ಟವರ್ಸ್, ಮೊದಲ ಮಹಡಿ, 5ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-18, ದೂ: 8884432666, ಫ್ಯಾಕ್ಸ್: 080-26257464

No comments:
Post a Comment
ಅನಿಸಿಕೆ ತಿಳಿಸಿ