ಹುಬ್ಬಳ್ಳಿ ಆರ್ಯುವೇದ ಮಹಾವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಬೋಧಕ, ಬೋಧಕೇತರ ಹುದ್ದೆಗಳ ಭರ್ತಿ ಸಂದರ್ಭ ಮೀಸಲಾತಿ ನಿಯಮಗಳನ್ನು ಗಾಳಿಗೆ ತೂರಿರುವವರ ವಿರುದ್ಧ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶಿಸಿದೆ.
ನೇರ ನೇಮಕಾತಿ ಮತ್ತು ಮುಂಬಡ್ತಿ ಮೂಲಕ ಖಾಲಿ ಹುದ್ದೆ ಭರ್ತಿ ಮಾಡುವಾಗ ಮೀಸಲಾತಿ ನಿಯಮ ಉಲ್ಲಂಘಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ತನಿಖೆ ನಡೆಸಿ ನೀಡಿರುವ ವರದಿ ಹಿನ್ನೆಲೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಮತ್ತು ಕಾರ್ಯದರ್ಶಿ ವಿರುದ್ದ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳ ನಿಯಮ 2000ರ ನಿಯಮಗಳ ಕಲಂ 5ರ ಪ್ರಕಾರ ಕ್ರಮ ಜರುಗಿಸುವಂತೆ ಆದೇಶದಲ್ಲಿ (ಸಂಖ್ಯೆ: ಸಕಿ 37 ಎಸ್ಟಿಸಿ 2018) ತಿಳಿಸಲಾಗಿದೆ. ಅಲ್ಲದೆ, ಸದರಿ ಸಂಸ್ಥೆಗೆ ನೀಡಲಾಗುತ್ತಿರುವ ಅನುದಾನ ತಡೆ ಹಿಡಿಯಬೇಕು ಎಂದು ಆದೇಶಿಸಲಾಗಿದೆ.
1986ನೇ ಸಾಲಿನಿಂದ ಈ ತನಕವೂ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವಾಗ ಮೀಸಲಾತಿ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಹಿರಿಯ ಪತ್ರಕರ್ತ ಭೋಜಶೆಟ್ಟರ ಸರ್ಕಾರಕ್ಕೆ ದೂರು ಸಲ್ಲಿಸಿ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಆದೇಶಿಸಲಾಗಿತ್ತು.
ಪ್ರಕರಣ ಮುಚ್ಚಿಹಾಕಲು ಪ್ರಯತ್ನ
ಮೀಸಲು ನಿಯಮ ಉಲ್ಲಂಘನೆ ಗಂಭೀರ ಪ್ರಕರಣ ವಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಪ್ರಕರಣ ಮುಚ್ಚಿ ಹಾಕುವ ಮೂಲಕ ಸಂಸ್ಥೆ ಪ್ರಾಂಶುಪಾಲ, ಕಾರ್ಯದರ್ಶಿ ರಕ್ಷಣೆಗೆ ತೆರೆಮರೆ ಪ್ರಯತ್ನ ನಡೆಯುತ್ತಿದೆ ಎಂದು ಭೋಜಶೆಟ್ಟರ ದೂರಿದ್ದಾರೆ. ಕೆಲ ಪಟ್ಟಭದ್ರರ ಹಿತಾಸಕ್ತಿಗೆ ಮಣಿದು ಕ್ರಿಮಿನಲ್ ಪ್ರಕರಣ ದಾಖಲು ಮಾಡದೆ ಮೀನಮೇಷ ಎಣಿಸುತ್ತಿರುವ ಸರ್ಕಾರ, ಈಗಲಾದರೂ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂಬಡ್ತಿ ರಕ್ಷಿಸುವ ಕಾಯ್ದೆ ಜಾರಿ ಮಾಡುವುದಾಗಿ ಸರ್ಕಾರದ ವತಿಯಿಂದ ಸಲ್ಲಿಸುವ ಅಫಿಡವಿಟ್ಗೆ ಸಿಎಂ ಗುರುವಾರ ಸಹಿ ಮಾಡಿ ಕಳಿಸಿಕೊಟ್ಟಿದ್ದರು. ನ್ಯಾಯಾಲಯದಲ್ಲಿ ಯಾವ ತೀರ್ಮಾನ ಆಗುತ್ತದೆ ಎಂದು ನೋಡಿ ಮುಂದಿನ ಚರ್ಚೆ ಮಾಡಲಾಗುತ್ತದೆ.
| ಪ್ರಿಯಾಂಕ್ ಖರ್ಗೆ ಸಮಾಜ ಕಲ್ಯಾಣ ಸಚಿವ
ಮುಂಬಡ್ತಿ ಕುರಿತು ನ್ಯಾಯಾಲಯ ವಿಚಾರಣೆ ಮುಂದೂಡಿದೆ. ಈ ಬಗ್ಗೆ ನಮ್ಮ ಕಾನೂನು ಇಲಾಖೆ ಪರಾಮರ್ಶೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ.
| ಎಚ್.ಡಿ. ಕುಮಾರಸ್ವಾಮಿ ಸಿಎಂ

No comments:
Post a Comment
ಅನಿಸಿಕೆ ತಿಳಿಸಿ